Sunday, 15 May 2011
Tuesday, 19 April 2011
ಔಷಧೀಯ ಗುಣಗಳನ್ನು ಹೊಂದಿರುವ ತುಳಸಿ
ಭಾರತೀಯ ಸಂಸ್ಕೃತಿಯಲ್ಲಿ ತುಳಸಿಯ ಪಾತ್ರ ಮಹತ್ವದ್ದು. ತುಳಸಿಕಟ್ಟೆಯನ್ನು ಹೊಂದಿರದ ಹಿಂದೂಗಳ ಮನೆಯೇ ಇಲ್ಲ. ಅಂತಹ ತುಳಸಿ ಪವಿತ್ರವಾದದ್ದು ಮಾತ್ರವಲ್ಲ, ರೋಗ ನಿರೋಧಕ ಶಕ್ತಿ ಸೇರಿದಂತೆ ಆರೋಗ್ಯಕ್ಕೆ ಅನುಗುಣವಾದದ್ದು ಎಂದು ಹಲವು ಸಂಶೋಧನೆಗಳು ಹೇಳಿವೆ.
ಹಿಂದೂ ಧಾರ್ಮಿಕ ಸಂಪ್ರದಾಯದ ಪ್ರಮುಖ ಅಂಗವಾಗಿರುವ ತುಳಸಿ (Ocimum tenuiflorum) ಹಲವು ಔಷಧೀಯ ಗುಣಗಳನ್ನು ಹೊಂದಿದೆ. ಹಿಂದೂಗಳು ಇದನ್ನು ಅತ್ಯಂತ ಪವಿತ್ರವಾಗಿ ಕಾಣುತ್ತಾ ಪೂಜೆ ಮಾಡುವುದು ಸಾಮಾನ್ಯ. ತುಳಸಿಯನ್ನು ಸ್ಪರ್ಶಿಸುವುದರಿಂದ ಪಾಪಗಳು ಪರಿಹಾರವಾಗುತ್ತವೆಯೆಂಬ ನಂಬಿಕೆ ಮಾತ್ರವಲ್ಲ, ಹಲವು ರೋಗಗಳು ಶಮನವಾಗುತ್ತದೆ ನಾಶವಾಗುತ್ತಯೆಂಬ ನಂಬಿಕೆಯೂ ಬೆಳೆದು ಬಂದಿದೆ.
ಮುಖ್ಯವಾಗಿ ತುಳಸಿಯಲ್ಲಿ ಎರಡು ವಿಧಗಳಿವೆ. ಕರಿ ಅಥವಾ ಶ್ಯಾಮ ವರ್ಣದ ಕೃಷ್ಣ ತುಳಸಿ ಮತ್ತು ತಿಳಿಬಣ್ಣದ ರಾಮ ತುಳಸಿ. ಸಾಮಾನ್ಯವಾಗಿ ಪೂಜೆಗೆ ಬಳಸುವ ಕೃಷ್ಣ ತುಳಸಿಯು ಹಲವು ವೈದ್ಯಕೀಯ ಗುಣಗಳನ್ನು ಹೊಂದಿವೆ.
ಈ ಗಿಡಮೂಲಕೆಯು ಶೀತ, ತಲೆನೋವು, ಅಜೀರ್ಣ, ಮಲೇರಿಯಾ ಮತ್ತು ಹೃದಯ ಸಂಬಂಧದ ಸಮಸ್ಯೆಗಳಿಗೆ ಔಷಧಿಯಾಗಿ ಬಳಸಲಾಗುತ್ತದೆ. ಅಲ್ಲದೆ ಶರೀರದಲ್ಲಿರುವ ಹಲವು ವಿಷಕ್ರಿಮಿಗಳನ್ನು ಇವು ನಾಶ ಮಾಡುತ್ತದೆ.
ದೇವಸ್ಥಾನ, ಯಾತ್ರಾಸ್ಥಳ ಮತ್ತು ಸಂಪ್ರದಾಯಸ್ಥ ಹಿಂದೂ ಕುಟುಂಬದಲ್ಲಿ ಇವುಗಳು ಹೆಚ್ಚಾಗಿ ಕಾಣ ಸಿಗುತ್ತದೆ. ಇವುಗಳಿಗೆ ಒತ್ತಡ ನಿವಾರಿಸುವ ಶಕ್ತಿಯು ಇದೆ. ತುಳಸಿಯ ಎಲೆಗಳನ್ನು ಹಸಿಯಾಗಿ ಅಥವಾ ಒಣಗಿಸಿ ಪುಡಿಯ ರೂಪದಲ್ಲಿ ಅಥವಾ ಪಾನೀಯ ರೂಪದಲ್ಲಿ ಕುಡಿಯಲಾಗುತ್ತಿದೆ.
ಹಂದಿಜ್ವರಕ್ಕೂ ರಾಮಬಾಣ...
ಆಯುರ್ವೇದ ಪ್ರಕಾರ ಹಂದಿಜ್ವರ ನಿವಾರಣೆಗೆ ತುಳಸಿ ರಾಮಬಾಣವಂತೆ. ಇದರಲ್ಲಿರುವ ಔಷಧೀಯ ಗುಣಗಳು ಎಚ್1ಎನ್1 ರೋಗಾಣುಗಳು ಶರೀರಕ್ಕೆ ಪ್ರವೇಶಿಸದಂತೆ ರಕ್ಷಿಸುತ್ತದೆಯಂತೆ.
ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ತುಳಸಿ ವೃದ್ಧಿಪಡಿಸುತ್ತದೆ. ಅಲ್ಲದೆ ಹಂದಿಜ್ವರ ರೋಗಾಣುಗಳನ್ನು ಹತ್ತಿಕ್ಕುವ ಗುಣ ತುಳಸಿಯಲ್ಲಿದೆ ಎಂದು ವೈದ್ಯಕೀಯ ತಜ್ಞರು ಅಭಿಪ್ರಾಯಪಡುತ್ತಾರೆ.
ತುಳಸಿ ಎಲೆಗಳು ಹಂದಿಜ್ವರ ಬರದಂತೆ ತಡೆಗಟ್ಟುತ್ತದೆ. ಹಾಗೆಯೇ ರೋಗ ಪೀಡಿತರಾದವರು ಶೀಘ್ರದಲ್ಲೇ ಗುಣಮುಖವಾಗಲು ನೆರವಾಗುತ್ತದೆ ಎಂದು ವೈದ್ಯರು ಅಭಿಪ್ರಾಯಪಡುತ್ತಾರೆ.
ಆರೋಗ್ಯದ ದೃಷ್ಟಿಕೋನದಿಂದ ಪ್ರತಿದಿನ 7ರಿಂದ 8 ತುಲಸಿ ಎಲೆಗಳನ್ನು ತಿನ್ನುವುದು ಉತ್ತಮ. ಇದರಿಂದ ರೋಗ ನಿರೋಧಕ ಶಕ್ತಿ ವೃದ್ದಿಯಾಗುವುದಲ್ಲದೆ ಬಾಯಿಯ ದುರ್ಗಂಧವು ಕೂಡಾ ನಿವಾರಣೆಯಾಗುತ್ತದೆ.
ದಿನನಿತ್ಯ ತುಳಸಿ ಸೇವನೆಯಿಂದ ಅಡ್ಡ ಪರಿಣಾಮಗಳೇನು ಇಲ್ಲ. ಜ್ವರ, ವಿಷಮ ಶೀತ, ಶ್ವಾಸಕೋಶದ ಸೋಂಕು, ಕೆಮ್ಮು ಮತ್ತು ನೆಗಡಿ ಹೋಗಾಡಿಸಲು ಇದರಿಂದ ಸಾಧ್ಯ. ತುಳಸಿ ಕಷಾಯ ಕುಡಿದರೆ ದೇಹ ಸದೃಢವಾಗುವುದರೊಂದಿಗೆ ಹೊಟ್ಟೆ ಸಂಬಂಧಿ ರೋಗಳನ್ನು ದೂರವಿರಿಸಬಹುದು.
ತುಳಸಿ ಎಲೆಯ ರಸವನ್ನು ಎಣ್ಣೆಯಲ್ಲಿ ಕಾಯಿಸಿ ತಲೆಗೆ ಹಚ್ಚುವುದರಿಂದ ತಲೆಯಲ್ಲಿನ ಹೇನು, ಹೊಟ್ಟು ಬರುವಿಕೆ ಕೂಡಾ ನಿವಾರಣೆಯಾಗುತ್ತದೆ. ಹಾಗೆಯೇ ಹಲವು ವಿಧದ ಚರ್ಮ ಸಂಬಂಧಿ ರೋಗಗಳಿಂದಲೂ ನಿವಾರಣೆ ಮಾಡುತ್ತದೆ. ಇದರಿಂದ ಚರ್ಮ ಮೃದುವಾಗುವುದಲ್ಲದೆ ಅಂದವಾಗುತ್ತದೆ. ಮನೆ ಪರಿಸರದಲ್ಲಿ ತುಳಸಿ ಗಿಡಗಳನ್ನು ಬೆಳೆಸುವ ಮೂಲಕ ಸೊಳ್ಳೆಗಳನ್ನು ದೂರವಿರಿಸಬಹುದು. ಒಟ್ಟಿನಲ್ಲಿ ಉತ್ತಮ ಆರೋಗ್ಯಕ್ಕಾಗಿ ತುಳಸಿ ಸೇವನೆ ಉತ್ತಮ.
*ನಾಗರಾಜ್ ಬೇಳ
ಪ್ರತಿ ಮನೆಯ ಅತಿಥಿ ಆಗಿರುವ ಶೀತ, ನೆಗಡಿ
ಮಳೆಗಾಲ ಅಥವಾ ಚಳಿಗಾಲವೇ ಆಗಲಿ, ಕೆಮ್ಮು ಹಾಗೂ ಶೀತ ಸಾಮಾನ್ಯ. ಆದರೆ ಇದು ಕೇವಲ ತಂಪಾದ ಹವೆದಿಂದ ಮಾತ್ರ ಬರುವುದಿಲ್ಲ. ಅಲರ್ಜಿ, ಕೆಲವೊಂದು ಪರಿಸ್ಥಿತಿಗಳಲ್ಲಿ ಜನರೊಂದಿಗೆ ಹೆಚ್ಚು ಬೆರೆಯುವುದರಿಂದಲೂ ನೆಗಡಿ ಉಂಟಾಗುತ್ತದೆ. ಇದರ ಕಿರಿಕಿರಿ ಮಾತ್ರ ಹೇಳತೀರದು.
ಪ್ರತಿ ಮನೆಯ ಅಪರೂಪವಲ್ಲದ ಈ ಅತಿಥಿಯು ಇತರರಿಗೆ ಹರಡಲು ಹೆಚ್ಚು ಕಷ್ಟಪಡಬೇಕಿಲ್ಲ. ಮೂಗನ್ನು ಕೈಯಿಂದ ಸೀದ ನಂತರ ಆ ವ್ಯಕ್ತಿಯು ಅದೇ ಕೈಯಿಂದ ಇನ್ನೊಬ್ಬ ವ್ಯಕ್ತಿಯನ್ನು ಮುಟ್ಟಿದರೂ ವೈರಸ್ ಹರಡಿ ನೆಗಡಿ ಉಂಟಾಗಬಹುದು. ಸಾಮಾನ್ಯವಾಗಿ ಕೆಮ್ಮು ಮತ್ತು ಸೀನುವಿಕೆಯಿಂದಾಗಿ ಮಾತ್ರ ಕೆಮ್ಮು ಹರಡುತ್ತದೆ ಎಂಬುದು ತಪ್ಪು ಭಾವನೆ. ನಾವು ದಿನನಿತ್ಯ ಉಪಯೋಗಿಸುವಂತಹ ವಸ್ತುಗಳಲ್ಲಿರುವ ಹಲವು ವೈರಸ್‌ಗಳಿಂದಲೂ ಇದು ಪಸರಿಸುತ್ತದೆ.
ದಿನನಿತ್ಯ ಬಳಕೆಯಾಗುವ ವಸ್ತುಗಳಲ್ಲಿ ರೋಗಾಣಗಳು ಗಂಟೆಗಟ್ಟಲೆ ಜೀವಂತವಾಗಿರುತ್ತವೆ. ಹಾಗಾಗಿ ಇಂತಹ ವಸ್ತುಗಳಿಂದಲೂ ಸೋಂಕು ಹರಡುತ್ತವೆ. ದೈನಂದಿನ ಜೀವನದಲ್ಲಿ ಬಳಕೆಯಾಗುವ ಎಲ್ಲಾ ವಸ್ತುಗಳನ್ನು ಸ್ವಚ್ಛವಾಗಿಡಿಲು ಯತ್ನಿಸುವುದು ಈ ನಿಟ್ಟಿನಲ್ಲಿ ಅಗತ್ಯ.
'ವಿಟಮಿನ್ ಡಿ' ಕೊರತೆ ಶೀತ ಮತ್ತು ನೆಗಡಿ ಬರುವ ಸಾಧ್ಯತೆಗಳು ಹೆಚ್ಚು. ಯಾಕೆಂದರೆ ರೋಗಾಣುಗಳ ವಿರುದ್ಧ ವಿಟಮಿನ್ ಡಿ ಹೋರಾಡುತ್ತಿರುತ್ತದೆ. ದೇಹದಲ್ಲಿ ಇದರ ಪ್ರಮಾಣ ಕಡಿಮೆಯಾಗುತ್ತಿದ್ದಂತೆಯೇ ರೋಗ ನಿರೋಧಕ ಶಕ್ತಿಯೂ ಕುಂಠಿತವಾಗುತ್ತದೆ. ಇದರಿಂದಾಗಿ ಶೀತ ಮತ್ತು ನೆಗಡಿಯು ಸುಲಭವಾಗಿ ವ್ಯಕ್ತಿಯನ್ನು ಆವರಿಸುತ್ತವೆ.
ನಮ್ಮ ಶರೀರಕ್ಕೆ ವಿಟಮಿನ್ ಡಿ ಪ್ರಮಾಣ ಸೂರ್ಯ ಪ್ರಕಾಶದಿಂದ ಸಿಗುತ್ತದೆ. ಆದರೆ ಚಳಿ ಮತ್ತು ಮಳೆಗಾಲದಲ್ಲಿ ಸೂರ್ಯನ ಬೆಳಕು ಸಿಗದೇ ಇರುವ ಸಂದರ್ಭದಲ್ಲಿ ವಿಟಮಿನ್ ಡಿ ಪ್ರಭಾವವೂ ಕುಂಠಿತವಾಗುತ್ತದೆ. ಇದು ಶೀತ ಮತ್ತು ನೆಗಡಿ ಹೆಚ್ಚಲು ಕಾರಣವಾಗುತ್ತದೆ.
ಇದನ್ನು ತಡೆಗಟ್ಟಲು ಪ್ರತಿದಿನ ರಾತ್ರಿ ಮಲಗುವುದಕ್ಕಿಂತ ಮುಂಚೆ ಹಾಲು ಕುಡಿಯುವುದು ಉತ್ತಮ. ಯಾಕೆಂದರೆ ಹಾಲಿನಿಂದಲೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಬಹುದು. ಹಾಗೆಯೇ ಬಿಸಿ ಹಾಲಿಗೆ ಕಾಳು ಮೆಣಸಿನ ಪುಡಿ ಮತ್ತು ಕಲ್ಲುಸಕ್ಕರೆ ಸೇರಿಸಿ ಕುಡಿಯುವುದರಿಂದಲೂ ನೆಗಡಿ ಕಡಿಮೆಯಾಗುತ್ತದೆ.
ಜೇನುತುಪ್ಪದಲ್ಲಿ ಕಾಳುಮೆಣಸಿನ ಚೂರ್ಣವನ್ನು ಕಲಸಿ ಸೇವಿಸುವ ಮೂಲಕವೂ ಇದರ ನಿವಾರಣೆ ಮಾಡಬಹುದು. ವಿಪರೀತ ಕೆಮ್ಮು ಉಂಟಾದ ಸಂದರ್ಭದಲ್ಲಿ ಅರಿಶಿನ ಪುಡಿಯನ್ನು ಕೆಂಡದ ಮೇಲೆ ಚೆಲ್ಲಿ, ಅದರಿಂದ ಹೊರಡುವ ಹೊಗೆಯನ್ನು ಮೂಗಿನ ಮೂಲಕ ಸೇವಿಸಿಯೂ ಇದರ ಪ್ರಭಾವ ಕಡಿಮೆ ಮಾಡಬಹುದು.

ಕೂದಲು ಉದುರುವಿಕೆಗೆ ಮಾನಸಿಕ ಒತ್ತಡವೂ ಕಾರಣ
ತಲೆಗೂದಲೆಂದರೆ ಸೌಂದರ್ಯದ ಪ್ರತೀಕ. ಹಾಗೆಂದು ಪ್ರತಿಯೊಬ್ಬರೂ ಪರಿಗಣಿಸಿರುವುದರಿಂದಲೇ ಕೂದಲು ಉದುರುವಿಕೆ ಎನ್ನುವುದು ಇಂದಿನ ಪ್ರಮುಖ ಸಮಸ್ಯೆಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಇದರ ಹಿಂದಿನ ಕಾರಣಗಳನ್ನು ಹುಡುಕುತ್ತಾ ಹೋದರೆ ಅಲ್ಲಿ ಸಿಗುವ ದೊಡ್ಡ ಮಿಕ ಮಾನಸಿಕ ಒತ್ತಡ.
ಕೂದಲು ಉದುರುವಿಕೆ ಸಮಸ್ಯೆಗೆ ಹೆಚ್ಚು ತಲೆ ಕೆಡಿಸಿಕೊಳ್ಳುತ್ತಿರುವುದು ಇಂದಿನ ಯುವ ಜನತೆ ಮತ್ತು ಕೂದಲು ಉದುರುತ್ತಿರುವುದು ಕೂಡ ಯುವ ಜನತೆಯದ್ದೇ. ಪುರುಷರಿಗಿಂತ ಸ್ತ್ರೀಯರಲ್ಲಿ ಕೂದಲಿನ ಬಗ್ಗೆ ಅತಿಯಾದ ಕಾಳಜಿ ಹೆಚ್ಚಾದರೂ, ಈ ಸಮಸ್ಯೆಯಿಂದ ಹೆಚ್ಚೆಚ್ಚು ಬಾಧೆಗೊಳಗಾಗುತ್ತಿರುವುದು ಪುರುಷರು ಎಂಬುದು ವಾಸ್ತವ. ವಯಸ್ಸು ಇಪ್ಪತ್ತಾಗುತ್ತಿದ್ದಂತೆ ತಲೆಯಲ್ಲಿ ಸೂರ್ಯ-ಚಂದ್ರನ ಮಚ್ಚೆಗಳು ಕಾಣಿಸಿಕೊಳ್ಳುವುದು ಸಹಜವಾಗಿಯೇ ಆತಂಕಕ್ಕೂ ಕಾರಣವಾಗುತ್ತಿದೆ.
ಆದರೆ ಇದಕ್ಕೆ ಆತಂಕವೇ ಕಾರಣ ಎನ್ನುತ್ತಾರೆ ತಜ್ಞ ವೈದ್ಯರು. ಕೆಲವು ಸಂದರ್ಭಗಳಲ್ಲಿ ಕಾರಣವಿಲ್ಲದೆ ಕೂದಲುಗಳು ಉದುರಬಹುದು. ಇಲ್ಲಿ ಮಾನಸಿಕ ಒತ್ತಡ, ಹಾರ್ಮೋನುಗಳ ವ್ಯತ್ಯಾಸ, ಅನಾರೋಗ್ಯದ ಸಂದರ್ಭದಲ್ಲಿ ತೆಗೆದುಕೊಳ್ಳುವ ಔಷಧಿಗಳ ದುಷ್ಪರಿಣಾಮ ಮುಂತಾದ ಹತ್ತು ಹಲವು ಕಾರಣಗಳು ದಿನದಿಂದ ದಿನಕ್ಕೆ ಇದಕ್ಕೆ ಸೇರ್ಪಡೆಯಾಗುತ್ತಾ ಬಂದಿದೆ.
ವೈದ್ಯರ ಪ್ರಕಾರ ದೇಹಕ್ಕೆ ಅಗತ್ಯ ಪೋಷಕಾಂಶಗಳ ಕೊರತೆಯಾದಾಗಲೂ ಕೂದಲು ಉದುರುತ್ತದೆ. ಹಾಗಾಗಿ ಕೂದಲು ಕಾಂತಿಯುತವಾಗಿ ಕಾಣಿಸಿಕೊಳ್ಳಲು ಪೌಷ್ಠಿಕಾಂಶಯುಕ್ತ ಆಹಾರಗಳ ಸೇವನೆಯೂ ಅಗತ್ಯ. ದೈನಂದಿನ ಆಹಾರ ಕ್ರಮದಲ್ಲಿ ಹೆಚ್ಚೆಚ್ಚು ತರಕಾರಿ ಮತ್ತು ಹಣ್ಣು ಹಂಪಲುಗಳ ಬಳಕೆಯೂ ಹೆಚ್ಚು ಫಲಕಾರಿ.
ಕೆಲವರಲ್ಲಿ ನರಸಂಬಂಧೀ ದುರ್ಬಲತೆ ಇದ್ದಾಗ ಕೂದಲುಗಳ ಬೆಳವಣಿಗೆ ಕುಂಠಿತವಾಗುತ್ತದೆ. ಅಲ್ಲದೆ ಹಾರ್ಮೋನ್‌ಗಳ ಏರುಪೇರಿನಿಂದಾಗಿಯೂ ಕೂದಲು ಬೇಗನೆ ಬೆಳ್ಳಗಾಗುವ ಲಕ್ಷ್ಮಣಗಳು ಕಂಡುಬರುತ್ತಿವೆ.
ಆದರೆ ಇನ್ನು ಕೆಲವರಿಗೆ ವಂಶಪಾರಂಪರ್ಯವಾಗಿ ಕೂದಲು ಉದುರುವಿಕೆ ವಯೋಮಾನಕ್ಕೆ ವಿರುದ್ಧವಾಗಿ ಆರಂಭವಾಗುತ್ತದೆ. ಫಂಗಸ್ ಸೋಂಕಿನಿಂದ ಉಂಟಾಗುವ ಕೂದಲು ಉದುರುವಿಕೆಯನ್ನು ತಡೆಗಟ್ಟಲು ಒಬ್ಬರು ಉಪಯೋಗಿಸಿದ ಬಾಚಣಿಗೆಯನ್ನು ಇನ್ನೊಬ್ಬರು ಉಪಯೋಗಿಸದಿದ್ದರೆ ಒಳಿತು.
ದೀರ್ಘಕಾಲೀನ ಪೋಷಕಾಂಶಗಳ ಕೊರತೆಯಿಂದಾಗಿ ಕೂದಲುಗಳ ತಮ್ಮ ಆಯುಷ್ಯವನ್ನು ಕಳೆದುಕೊಳ್ಳುತ್ತದೆ. ಚಿಕ್ಕ ವಯಸ್ಸಿನಲ್ಲಿಯೇ ಕೂದಲು ಬೆಳ್ಳಗಾಗುವುದಕ್ಕೆ ಅಧಿಕ ಲವಣಯುಕ್ತ ಆಹಾರಗಳ ಸೇವನೆಯು ಕಾರಣವಾಗುತ್ತದೆ.
ಸರಿಯಾದ ಆರೈಕೆಯಿಂದ ಕೂದಲು ಉದುರುವಿಕೆಯನ್ನು ತಡೆಗಟ್ಟಬಹುದು. ಕೂದಲ ಉತ್ತಮ ಆರೋಗ್ಯಕ್ಕಾಗಿ ಕೊಬ್ಬರಿ ಎಣ್ಣೆ ಬಳಕೆ ಉತ್ತಮ. ಇದು ಸರಿಯಾದ ರಕ್ತ ಸಂಚಾರಕ್ಕೆ ಎಡೆ ಮಾಡಿಕೊಡುತ್ತದೆ. ಅದೇ ರೀತಿ ದಾಸವಾಳ ಗಿಡದ ಎಲೆಗಳನ್ನು ರುಬ್ಬಿ ಅದರಿಂದ ದೊರಕುವ ರಸವನ್ನು ತಲೆಗೆ ಲೇಪಿಸುವುದು ಉತ್ತಮ. ಆ ಮೂಲಕ ಶಾಂಪೂ ಬಳಕೆಯನ್ನು ತಪ್ಪಿಸಬಹುದಲ್ಲದೆ ಇದು ಕೂದಲನ್ನು ನಯವಾಗಿಸುತ್ತದೆ.
ಅಂದ ಹಾಗೆ ಕೂದಲಿಗೆ ಬಣ್ಣ ಹಚ್ಚುವುದು, ಬ್ಲೀಚ್ ಮಾಡುವುದರಿಂದ ಒಂದು ಹಂತದಲ್ಲಿ ಸುಂದರ, ಕಾಂತಿಯುತ ಕೂದಲನ್ನು ಕಾಣಬಹುದಾದರೂ, ನಂತರದ ದಿನಗಳಲ್ಲಿ ವ್ಯತಿರಿಕ್ತ ಪರಿಣಾಮಗಳನ್ನು ಎದುರಿಸುವ ಸಾಧ್ಯತೆಗಳೇ ಹೆಚ್ಚು ಎನ್ನುವುದನ್ನು ನೆನಪಿನಲ್ಲಿ ಇಟ್ಟುಕೊಳ್ಳಬೇಕಾದ ಅಗತ್ಯವಿದೆ.
-ನಾಗರಾಜ್ ಬೇಳ ಕೂದಲು ಉದುರುವಿಕೆ ಸಮಸ್ಯೆಗೆ ಹೆಚ್ಚು ತಲೆ ಕೆಡಿಸಿಕೊಳ್ಳುತ್ತಿರುವುದು ಇಂದಿನ ಯುವ ಜನತೆ ಮತ್ತು ಕೂದಲು ಉದುರುತ್ತಿರುವುದು ಕೂಡ ಯುವ ಜನತೆಯದ್ದೇ. ಪುರುಷರಿಗಿಂತ ಸ್ತ್ರೀಯರಲ್ಲಿ ಕೂದಲಿನ ಬಗ್ಗೆ ಅತಿಯಾದ ಕಾಳಜಿ ಹೆಚ್ಚಾದರೂ, ಈ ಸಮಸ್ಯೆಯಿಂದ ಹೆಚ್ಚೆಚ್ಚು ಬಾಧೆಗೊಳಗಾಗುತ್ತಿರುವುದು ಪುರುಷರು ಎಂಬುದು ವಾಸ್ತವ. ವಯಸ್ಸು ಇಪ್ಪತ್ತಾಗುತ್ತಿದ್ದಂತೆ ತಲೆಯಲ್ಲಿ ಸೂರ್ಯ-ಚಂದ್ರನ ಮಚ್ಚೆಗಳು ಕಾಣಿಸಿಕೊಳ್ಳುವುದು ಸಹಜವಾಗಿಯೇ ಆತಂಕಕ್ಕೂ ಕಾರಣವಾಗುತ್ತಿದೆ.
ಆದರೆ ಇದಕ್ಕೆ ಆತಂಕವೇ ಕಾರಣ ಎನ್ನುತ್ತಾರೆ ತಜ್ಞ ವೈದ್ಯರು. ಕೆಲವು ಸಂದರ್ಭಗಳಲ್ಲಿ ಕಾರಣವಿಲ್ಲದೆ ಕೂದಲುಗಳು ಉದುರಬಹುದು. ಇಲ್ಲಿ ಮಾನಸಿಕ ಒತ್ತಡ, ಹಾರ್ಮೋನುಗಳ ವ್ಯತ್ಯಾಸ, ಅನಾರೋಗ್ಯದ ಸಂದರ್ಭದಲ್ಲಿ ತೆಗೆದುಕೊಳ್ಳುವ ಔಷಧಿಗಳ ದುಷ್ಪರಿಣಾಮ ಮುಂತಾದ ಹತ್ತು ಹಲವು ಕಾರಣಗಳು ದಿನದಿಂದ ದಿನಕ್ಕೆ ಇದಕ್ಕೆ ಸೇರ್ಪಡೆಯಾಗುತ್ತಾ ಬಂದಿದೆ.
ವೈದ್ಯರ ಪ್ರಕಾರ ದೇಹಕ್ಕೆ ಅಗತ್ಯ ಪೋಷಕಾಂಶಗಳ ಕೊರತೆಯಾದಾಗಲೂ ಕೂದಲು ಉದುರುತ್ತದೆ. ಹಾಗಾಗಿ ಕೂದಲು ಕಾಂತಿಯುತವಾಗಿ ಕಾಣಿಸಿಕೊಳ್ಳಲು ಪೌಷ್ಠಿಕಾಂಶಯುಕ್ತ ಆಹಾರಗಳ ಸೇವನೆಯೂ ಅಗತ್ಯ. ದೈನಂದಿನ ಆಹಾರ ಕ್ರಮದಲ್ಲಿ ಹೆಚ್ಚೆಚ್ಚು ತರಕಾರಿ ಮತ್ತು ಹಣ್ಣು ಹಂಪಲುಗಳ ಬಳಕೆಯೂ ಹೆಚ್ಚು ಫಲಕಾರಿ.
ಕೆಲವರಲ್ಲಿ ನರಸಂಬಂಧೀ ದುರ್ಬಲತೆ ಇದ್ದಾಗ ಕೂದಲುಗಳ ಬೆಳವಣಿಗೆ ಕುಂಠಿತವಾಗುತ್ತದೆ. ಅಲ್ಲದೆ ಹಾರ್ಮೋನ್‌ಗಳ ಏರುಪೇರಿನಿಂದಾಗಿಯೂ ಕೂದಲು ಬೇಗನೆ ಬೆಳ್ಳಗಾಗುವ ಲಕ್ಷ್ಮಣಗಳು ಕಂಡುಬರುತ್ತಿವೆ.
ಆದರೆ ಇನ್ನು ಕೆಲವರಿಗೆ ವಂಶಪಾರಂಪರ್ಯವಾಗಿ ಕೂದಲು ಉದುರುವಿಕೆ ವಯೋಮಾನಕ್ಕೆ ವಿರುದ್ಧವಾಗಿ ಆರಂಭವಾಗುತ್ತದೆ. ಫಂಗಸ್ ಸೋಂಕಿನಿಂದ ಉಂಟಾಗುವ ಕೂದಲು ಉದುರುವಿಕೆಯನ್ನು ತಡೆಗಟ್ಟಲು ಒಬ್ಬರು ಉಪಯೋಗಿಸಿದ ಬಾಚಣಿಗೆಯನ್ನು ಇನ್ನೊಬ್ಬರು ಉಪಯೋಗಿಸದಿದ್ದರೆ ಒಳಿತು.
ದೀರ್ಘಕಾಲೀನ ಪೋಷಕಾಂಶಗಳ ಕೊರತೆಯಿಂದಾಗಿ ಕೂದಲುಗಳ ತಮ್ಮ ಆಯುಷ್ಯವನ್ನು ಕಳೆದುಕೊಳ್ಳುತ್ತದೆ. ಚಿಕ್ಕ ವಯಸ್ಸಿನಲ್ಲಿಯೇ ಕೂದಲು ಬೆಳ್ಳಗಾಗುವುದಕ್ಕೆ ಅಧಿಕ ಲವಣಯುಕ್ತ ಆಹಾರಗಳ ಸೇವನೆಯು ಕಾರಣವಾಗುತ್ತದೆ.
ಸರಿಯಾದ ಆರೈಕೆಯಿಂದ ಕೂದಲು ಉದುರುವಿಕೆಯನ್ನು ತಡೆಗಟ್ಟಬಹುದು. ಕೂದಲ ಉತ್ತಮ ಆರೋಗ್ಯಕ್ಕಾಗಿ ಕೊಬ್ಬರಿ ಎಣ್ಣೆ ಬಳಕೆ ಉತ್ತಮ. ಇದು ಸರಿಯಾದ ರಕ್ತ ಸಂಚಾರಕ್ಕೆ ಎಡೆ ಮಾಡಿಕೊಡುತ್ತದೆ. ಅದೇ ರೀತಿ ದಾಸವಾಳ ಗಿಡದ ಎಲೆಗಳನ್ನು ರುಬ್ಬಿ ಅದರಿಂದ ದೊರಕುವ ರಸವನ್ನು ತಲೆಗೆ ಲೇಪಿಸುವುದು ಉತ್ತಮ. ಆ ಮೂಲಕ ಶಾಂಪೂ ಬಳಕೆಯನ್ನು ತಪ್ಪಿಸಬಹುದಲ್ಲದೆ ಇದು ಕೂದಲನ್ನು ನಯವಾಗಿಸುತ್ತದೆ.
ಅಂದ ಹಾಗೆ ಕೂದಲಿಗೆ ಬಣ್ಣ ಹಚ್ಚುವುದು, ಬ್ಲೀಚ್ ಮಾಡುವುದರಿಂದ ಒಂದು ಹಂತದಲ್ಲಿ ಸುಂದರ, ಕಾಂತಿಯುತ ಕೂದಲನ್ನು ಕಾಣಬಹುದಾದರೂ, ನಂತರದ ದಿನಗಳಲ್ಲಿ ವ್ಯತಿರಿಕ್ತ ಪರಿಣಾಮಗಳನ್ನು ಎದುರಿಸುವ ಸಾಧ್ಯತೆಗಳೇ ಹೆಚ್ಚು ಎನ್ನುವುದನ್ನು ನೆನಪಿನಲ್ಲಿ ಇಟ್ಟುಕೊಳ್ಳಬೇಕಾದ ಅಗತ್ಯವಿದೆ.
ಕ್ಷಯ ರೋಗದ ಬಗ್ಗೆ ನಿಮಗೆಷ್ಟು ತಿಳಿದಿದೆ?
'ಕ್ಷಯ' ಮಾನವನಿಗೆ ಅದೇ ರೀತಿ ಹಲವು ಪ್ರಾಣಿಗಳಿಗೆ ಬರುವ ಒಂದು ಮಾರಕ ರೋಗ. ಈ ರೋಗವು ಮೈಕೊ 'ಬ್ಯಾಕ್ಟೀರಿಯಂ ಟ್ಯೂಬರ್‌ಕ್ಯುಲೋಸಿಸ್' ಎಂಬ ಬ್ಯಾಕ್ಟೀರಿಯಾದಿಂದ ಉಂಟಾಗುತ್ತದೆ. ಪ್ರಮುಖವಾಗಿ ಪುಪ್ಪಸಗಳಿಗೆ ಹಾನಿ ಮಾಡುವ ಈ ರೋಗವು ದೇಹದ ಅಂಗಾಂಗಗಳ ಮೇಲೆ ಹಲವು ದುಷ್ಪರಿಣಾಮ ಬೀರುತ್ತದೆ.
ಕ್ಷಯ ರೋಗಕ್ಕೆ ಸಮಾರು ನೂರು ವರ್ಷಗಳ ಇತಿಹಾಸವಿದೆ. ಇದು ಸಂಪೂರ್ಣವಾಗಿ ಗುಣಪಡಿಸುಬಹುದಾದ ಕಾಯಿಲೆಯಾಗಿದೆ. ರೋಗಿಯೊಬ್ಬ ಕೆಮ್ಮಿದಾಗ ಕಫದಲ್ಲಿರುವ ರೋಗಾಣುವಿನಿಂದ ಈ ರೋಗ ಹರಡುತ್ತದೆ. ಕಾಯಿಲೆ ಇರುವವರು ಕೆಮ್ಮಿದಾಗ, ಸೀನಿದಾಗ ಅಥವಾ ಉಗುಳಿದಾಗ ತುಂತುರು ಹನಿಗಳ ಮೂಲಕ ಬೇರೊಬ್ಬ ವ್ಯಕ್ತಿಗೆ ರೋಗ ಹರಡಲು ಕಾರಣವಾಗುತ್ತದೆ. ಹೀಗಾಗಿ ಇದು ಗಾಳಿಯ ಮೂಲಕವೂ ಹರಡುತ್ತವೆ.
ಈ ಸೋಂಕು ತಗುಲಿದ ವ್ಯಕ್ತಿಯು ಒಂದು ವರ್ಷದಲ್ಲಿ ಹತ್ತು ಜನರಿಗೆ ಸೋಂಕು ತಗಲಿಸಬಹುದು. ಇದು ಸಾಮಾನ್ಯವಾಗಿ 15ರಿಂದ 45 ವರ್ಷದೊಳಗಿನವರಿಗೆ ಹೆಚ್ಚಾಗಿ ತಗಲುತ್ತವೆ. ಕ್ಷಯರೋಗದ ಪ್ರಮುಖ ಲಕ್ಷ್ಮಣಗಳು- ಕೆಮ್ಮು, ಜ್ವರ, ತೂಕ ಕಡಿಮೆಯಾಗುವುದು, ಅಶಕ್ತತೆ, ಕಫದಲ್ಲಿ ರಕ್ತ, ರಾತ್ರಿಯಲ್ಲಿ ಬೆವರು, ಎದೆನೋವು, ಹಸಿವಾಗದಿರುವುದು. ಎಚ್‌ಐವಿ, ಏಡ್ಸ್ ಮತ್ತು ಮಧುಮೇಹ ರೋಗಿಗಳಿಗೂ ಬೇಗನೇ ಸೋಂಕು ತಗಲುವ ಸಾಧ್ಯತೆ ಹೆಚ್ಚಿವೆ.
ಕ್ಷಯರೋಗದ ಲಕ್ಷ್ಮಣಗಳು ಕಂಡುಬಂದಲ್ಲಿ ತಾತ್ಸಾರ ಮಾಡದೆ ಕೂಡಲೇ ಅರ್ಹ ವೈದ್ಯರಿಂದ ಚಿಕಿತ್ಸೆ ಪಡೆಯಬೇಕು. ಸೂಕ್ತ ಚಿಕಿತ್ಸೆ ಪಡೆಯದಿದ್ದಲ್ಲಿ ರೋಗ ಮತ್ತಷ್ಟು ಮಾರಕವಾಗುವ ಸಾಧ್ಯತೆ ಹೆಚ್ಚಿದೆ. ಸರಿಯಾದ ಚಿಕಿತ್ಸೆ ಪಡೆಯದಿದ್ದರೆ ಶ್ವಾಸಕೋಶ, ಮೆದುಳು, ಬೆನ್ನಮೂಳೆ ಭಾಗಗಳಿಗೆ ಹಾನಿಕಾರಕವಾಗುತ್ತದೆ. ಹಾಗಾಗಿ ರೋಗವನ್ನು ಯಾವುದೇ ಹಂತದಲ್ಲಿಯೂ ಕಡೆಗಣಿಸಬಾರದು.
ಪೌಷ್ಠಿಕ ಆಹಾರ ಕೊರತೆಯಿಂದಾಗಿ ದೇಹದ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಇದ್ದರಿಂದ ರೋಗಾಣುಗಳು ಬೇಗನೇ ದೇಹವನ್ನು ಆಕ್ರಮಿಸುಕೊಳ್ಳುತ್ತವೆ. ಆದ್ದರಿಂದ ಪೌಷ್ಠಿಕ ಆಹಾರ ಸೇವಿಸುವ ಮೂಲಕ ಆರೋಗ್ಯ ಕಾಪಾಡಬೇಕು. ಕ್ಷಯ ರೋಗದ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ಆರೋಗ್ಯ ಕೇಂದ್ರವನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಬಹುದಾಗಿದೆ. ಕಫ ಪರೀಕ್ಷೆ, ಎಕ್ಸ್‌ರೇ ಮತ್ತು ರಕ್ತ ಪರೀಕ್ಷೆಯಿಂದಲೂ ರೋಗವನ್ನು ನಿರ್ಧರಿಸಬಹುದಾಗಿದೆ.
ರಿಫಾಂಪಿಸಿಸ್, ಇತ್ಯಾಂಬ್ಯುಟಾಲ್ ಮತ್ತು ಐಸೊನೆಕ್ಸ್‌ಗಳಂತಹ ಔಷಧಗಳಿಂದ ಈ ರೋಗ ವಾಸಿಯಾಗುತ್ತದೆ. ಈಗ ಡಾಟ್ಸ್ ಚಿಕಿತ್ಸಾ ವಿಧಾನದಲ್ಲಿ ಪರಿಣಾಮಕಾರಿ ಐದು ಔಷಧಿಗಳಿದ್ದು, ಕನಿಷ್ಠ 6 ತಿಂಗಳು ತಪ್ಪದೆ ಸೇವಿಸಬೇಕು. ರೋಗ ವಾಸಿಯಾಗದೇ ಔಷಧಿ ತೆಗೆದುಕೊಳ್ಳುವುದು ನಿಲ್ಲಿಸಿದ್ದರೆ ಮತ್ತೆ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.
ಕೆಮ್ಮುವ ಸಂದರ್ಭದಲ್ಲಿ ಇತರರಿಗೆ ಹರಡದಂತೆ ಕರವಸ್ತ್ರ ಉಪಯೋಗಿಸಬೇಕು. ಹಾಗೆಯೇ ಪರಿಸರ, ಸ್ವಚ್ಛ ಗಾಳಿಯ ಬಗ್ಗೆಯೂ ಜಾಗರೂಕತೆ ವಹಿಸಬೇಕು. ಮಾರ್ಚ್ 24ರಂದು ವಿಶ್ವ ಕ್ಷಯ ರೋಗ ಜಾಗೃತಿ ದಿನವಾಗಿ ಆಚರಿಸಲಾಗುತ್ತಿದೆ.
*ನಾಗರಾಜ್ ಬೇಳ ಕ್ಷಯ ರೋಗಕ್ಕೆ ಸಮಾರು ನೂರು ವರ್ಷಗಳ ಇತಿಹಾಸವಿದೆ. ಇದು ಸಂಪೂರ್ಣವಾಗಿ ಗುಣಪಡಿಸುಬಹುದಾದ ಕಾಯಿಲೆಯಾಗಿದೆ. ರೋಗಿಯೊಬ್ಬ ಕೆಮ್ಮಿದಾಗ ಕಫದಲ್ಲಿರುವ ರೋಗಾಣುವಿನಿಂದ ಈ ರೋಗ ಹರಡುತ್ತದೆ. ಕಾಯಿಲೆ ಇರುವವರು ಕೆಮ್ಮಿದಾಗ, ಸೀನಿದಾಗ ಅಥವಾ ಉಗುಳಿದಾಗ ತುಂತುರು ಹನಿಗಳ ಮೂಲಕ ಬೇರೊಬ್ಬ ವ್ಯಕ್ತಿಗೆ ರೋಗ ಹರಡಲು ಕಾರಣವಾಗುತ್ತದೆ. ಹೀಗಾಗಿ ಇದು ಗಾಳಿಯ ಮೂಲಕವೂ ಹರಡುತ್ತವೆ.
ಈ ಸೋಂಕು ತಗುಲಿದ ವ್ಯಕ್ತಿಯು ಒಂದು ವರ್ಷದಲ್ಲಿ ಹತ್ತು ಜನರಿಗೆ ಸೋಂಕು ತಗಲಿಸಬಹುದು. ಇದು ಸಾಮಾನ್ಯವಾಗಿ 15ರಿಂದ 45 ವರ್ಷದೊಳಗಿನವರಿಗೆ ಹೆಚ್ಚಾಗಿ ತಗಲುತ್ತವೆ. ಕ್ಷಯರೋಗದ ಪ್ರಮುಖ ಲಕ್ಷ್ಮಣಗಳು- ಕೆಮ್ಮು, ಜ್ವರ, ತೂಕ ಕಡಿಮೆಯಾಗುವುದು, ಅಶಕ್ತತೆ, ಕಫದಲ್ಲಿ ರಕ್ತ, ರಾತ್ರಿಯಲ್ಲಿ ಬೆವರು, ಎದೆನೋವು, ಹಸಿವಾಗದಿರುವುದು. ಎಚ್‌ಐವಿ, ಏಡ್ಸ್ ಮತ್ತು ಮಧುಮೇಹ ರೋಗಿಗಳಿಗೂ ಬೇಗನೇ ಸೋಂಕು ತಗಲುವ ಸಾಧ್ಯತೆ ಹೆಚ್ಚಿವೆ.
ಕ್ಷಯರೋಗದ ಲಕ್ಷ್ಮಣಗಳು ಕಂಡುಬಂದಲ್ಲಿ ತಾತ್ಸಾರ ಮಾಡದೆ ಕೂಡಲೇ ಅರ್ಹ ವೈದ್ಯರಿಂದ ಚಿಕಿತ್ಸೆ ಪಡೆಯಬೇಕು. ಸೂಕ್ತ ಚಿಕಿತ್ಸೆ ಪಡೆಯದಿದ್ದಲ್ಲಿ ರೋಗ ಮತ್ತಷ್ಟು ಮಾರಕವಾಗುವ ಸಾಧ್ಯತೆ ಹೆಚ್ಚಿದೆ. ಸರಿಯಾದ ಚಿಕಿತ್ಸೆ ಪಡೆಯದಿದ್ದರೆ ಶ್ವಾಸಕೋಶ, ಮೆದುಳು, ಬೆನ್ನಮೂಳೆ ಭಾಗಗಳಿಗೆ ಹಾನಿಕಾರಕವಾಗುತ್ತದೆ. ಹಾಗಾಗಿ ರೋಗವನ್ನು ಯಾವುದೇ ಹಂತದಲ್ಲಿಯೂ ಕಡೆಗಣಿಸಬಾರದು.
ಪೌಷ್ಠಿಕ ಆಹಾರ ಕೊರತೆಯಿಂದಾಗಿ ದೇಹದ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಇದ್ದರಿಂದ ರೋಗಾಣುಗಳು ಬೇಗನೇ ದೇಹವನ್ನು ಆಕ್ರಮಿಸುಕೊಳ್ಳುತ್ತವೆ. ಆದ್ದರಿಂದ ಪೌಷ್ಠಿಕ ಆಹಾರ ಸೇವಿಸುವ ಮೂಲಕ ಆರೋಗ್ಯ ಕಾಪಾಡಬೇಕು. ಕ್ಷಯ ರೋಗದ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ಆರೋಗ್ಯ ಕೇಂದ್ರವನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಬಹುದಾಗಿದೆ. ಕಫ ಪರೀಕ್ಷೆ, ಎಕ್ಸ್‌ರೇ ಮತ್ತು ರಕ್ತ ಪರೀಕ್ಷೆಯಿಂದಲೂ ರೋಗವನ್ನು ನಿರ್ಧರಿಸಬಹುದಾಗಿದೆ.
ರಿಫಾಂಪಿಸಿಸ್, ಇತ್ಯಾಂಬ್ಯುಟಾಲ್ ಮತ್ತು ಐಸೊನೆಕ್ಸ್‌ಗಳಂತಹ ಔಷಧಗಳಿಂದ ಈ ರೋಗ ವಾಸಿಯಾಗುತ್ತದೆ. ಈಗ ಡಾಟ್ಸ್ ಚಿಕಿತ್ಸಾ ವಿಧಾನದಲ್ಲಿ ಪರಿಣಾಮಕಾರಿ ಐದು ಔಷಧಿಗಳಿದ್ದು, ಕನಿಷ್ಠ 6 ತಿಂಗಳು ತಪ್ಪದೆ ಸೇವಿಸಬೇಕು. ರೋಗ ವಾಸಿಯಾಗದೇ ಔಷಧಿ ತೆಗೆದುಕೊಳ್ಳುವುದು ನಿಲ್ಲಿಸಿದ್ದರೆ ಮತ್ತೆ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.
ಕೆಮ್ಮುವ ಸಂದರ್ಭದಲ್ಲಿ ಇತರರಿಗೆ ಹರಡದಂತೆ ಕರವಸ್ತ್ರ ಉಪಯೋಗಿಸಬೇಕು. ಹಾಗೆಯೇ ಪರಿಸರ, ಸ್ವಚ್ಛ ಗಾಳಿಯ ಬಗ್ಗೆಯೂ ಜಾಗರೂಕತೆ ವಹಿಸಬೇಕು. ಮಾರ್ಚ್ 24ರಂದು ವಿಶ್ವ ಕ್ಷಯ ರೋಗ ಜಾಗೃತಿ ದಿನವಾಗಿ ಆಚರಿಸಲಾಗುತ್ತಿದೆ.
ಮೂವತ್ತಾಯಿತೇ? ಮಧುಮೇಹ ಪರೀಕ್ಷೆ ಮಾಡಿಸ್ಕೊಳ್ಳಿ...
ಮೊದಲೆಲ್ಲಾ ಅರುವತ್ತಕ್ಕೇ ಅರಳು ಮರಳು ಅನ್ನುವಂತಹಾ ಪರಿಸ್ಥಿತಿಯೂ, ಅರುವತ್ತು ವರ್ಷ ದಾಟಿದರೆ ಒಂದಿಲ್ಲೊಂದು ವೃದ್ಧಾಪ್ಯದ ಕಾಯಿಲೆ ಅಂಟಿಕೊಳ್ಳಲು ಶುರು ಹಚ್ಚಿಕೊಳ್ಳುತ್ತದೆ ಎಂಬ ಪರಿಸ್ಥಿತಿ ಇತ್ತು. ಆದರೆ ಈಗ ಹಾಗಿಲ್ಲ. ಕಾಲ ಬದಲಾಗಿದೆ. ವರುಷ ಮೂವತ್ತು ದಾಟಿತೋ, ಬೀಪಿ, ಶುಗರ್, ಬೊಜ್ಜು, ಹಾರ್ಟ್ ಪ್ರಾಬ್ಲಂ ಒಂದಿಲ್ಲೊಂದು ಮುತ್ತಿಕ್ಕಿಕೊಂಡು ಬಿಡಲಾರಂಭಿಸಿದೆ.
ಪ್ರಕೃತಿಯನ್ನು, ವಾತಾವರಣವನ್ನು ನಾವು ಅಷ್ಟರ ಮಟ್ಟಿಗೆ ಹಾಳು ಮಾಡಿಕೊಂಡಿದ್ದೇವೆ. ಹೀಗಾಗಿ ಇದ್ದುದರಲ್ಲೇ ಬದುಕಬೇಕಾದ ಅನಿವಾರ್ಯತೆ. ಅಂತಾರಾಷ್ಟ್ರೀಯ ಮಧುಮೇಹ ಒಕ್ಕೂಟ (ಐಡಿಎಫ್)ದ ವರದಿ ಪ್ರಕಾರ, ಭಾರತದಲ್ಲಿ ಮಧುಮೇಹ, ಸಕ್ಕರೆ ಕಾಯಿಲೆ, ಸಿಹಿಮೂತ್ರ ರೋಗ ಎಂದೆಲ್ಲಾ ಕರೆಯಲ್ಪಡುವ ಡಯಾಬಿಟೀಸ್‌ನಿಂದ ಬಳಲುತ್ತಿರುವವರ ಸಂಖ್ಯೆ 4.09 ಕೋಟಿ. ಇದು ಹೀಗೆಯೇ ಮುಂದುವರಿದರೆ, 2030ರ ವೇಳೆಗೆ ಜಗತ್ತಿನ ಐವರು ಮಧುಮೇಹಿಗಳಲ್ಲಿ ಒಬ್ಬ ಭಾರತೀಯ ಇರುವಷ್ಟರ ಮಟ್ಟಕ್ಕೆ ಮುಟ್ಟುತ್ತದೆಯಂತೆ!
ಹಾಗಿದ್ದರೆ, ಮಧುಮೇಹಕ್ಕೆ ಕಾರಣಗಳೇನು? ನಮ್ಮ ಬದಲಾಗಿರುವ ಜೀವನ ಶೈಲಿಯೇ? ಮಾನಸಿಕ ಒತ್ತಡವೇ? ನಮ್ಮ ಜೀನ್‌ಗಳೇ? ಈ ತೊಂದರೆ ಬಾರದಂತೆ, ಬಂದಿದ್ದನ್ನು ನಿಯಂತ್ರಿಸುವಂತೆ ಏನಾದರೂ ಉಪಾಯಗಳಿವೆಯೇ?
ಹೌದು, ಇದರಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವುದು ನಮ್ಮ ಜೀವನ ಶೈಲಿ ಎಂಬುದರಲ್ಲಿ ಎರಡು ಮಾತಿಲ್ಲ. ಈ ಜೀವನ ಶೈಲಿಯಲ್ಲಿ ಮಧುಮೇಹಕ್ಕೆ ಪೂರಕವಾಗುವಂಥವುಗಳ ಬಗ್ಗೆ ಒಂದಿಷ್ಟು ಗಮನ ಹರಿಸೋಣ:
ಕೂತಲ್ಲೇ ಕೆಲಸ...
ಮುಖ್ಯವಾಗಿ, ಇದು ಕುಳಿತು ತಿನ್ನುವ ಕಾಲ. ಅಂದರೆ ಒಂದು ಬೆಳಿಗ್ಗೆ ಕಂಪ್ಯೂಟರ್ ಎದುರು ಕುಳಿತರೆ ಏಳೋದು ರಾತ್ರೀನೇ. ಬರೇ ಕೈಬೆರಳುಗಳಿಗೆ ಮಾತ್ರವೇ ಒಂದಿಷ್ಟು ವ್ಯಾಯಾಮ ದೊರೆತರೆ ಸಾಕೇ? ದೇಹವೂ ಒಂದಿಷ್ಟು ಅಲುಗಾಡಬೇಡವೇ? ಕುಳಿತುಕೊಂಡೇ ಮಾಡುವ ಕೆಲಸ ಇರುವವರಿಗೆ ವಾಕಿಂಗ್ ಅಥವಾ ಮೆಟ್ಟಿಲೇರುವುದು... ಇಂಥವೆಲ್ಲ ಬೇಕೇ ಬೇಕು. ಕುಳಿತೇ ಕೆಲಸ ಮಾಡುವವರು ಒಂದು ಗಂಟೆಗೊಮ್ಮೆಯಾದರೂ ಎದ್ದು ಅತ್ತಿತ್ತ ಹೋಗಿ, ನೀರು ಕುಡಿದು ಬಂದರೆ ಒಳಿತು. ಕೂತಲ್ಲೇ ಕೆಲಸ ಮಾಡುವುದು ಬೊಜ್ಜು ಹೆಚ್ಚಿಸಬಹುದು, ಇದರಿಂದ ಡಯಾಬಿಟೀಸ್ ಚಿಗಿತುಕೊಳ್ಳಲೂ ಕಾರಣವಾಗಬಹುದು.
ಒತ್ತಡ...
ಡೆಡ್‌ಲೈನುಗಳನ್ನು ಮೀಟ್ ಮಾಡುವ ಸಾಹಸ, ಮಾರಾಟದಲ್ಲಿ ಇಂತಿಷ್ಟು ಗುರಿ ಸಾಧಿಸಬೇಕೆಂಬ ಒತ್ತಡ, ಇಷ್ಟು ಗಂಟೆಯೊಳಗೆ ಇಷ್ಟು ಕೆಲಸ ಆಗಲೇಬೇಕೆಂಬ ನಿಯಮ... ಇದಲ್ಲದೆ, ಹೊರಗಿನಿಂದಲೂ ಬೆಲೆ ಏರಿಕೆ, ಸಾಂಸಾರಿಕ ಒತ್ತಡಗಳು... ಕಚೇರಿಯಲ್ಲಿಯೂ ನೆಮ್ಮದಿಯಿಲ್ಲ... ಇಂತಹಾ ಪರಿಸ್ಥಿತಿಯು ಮಾನಸಿಕ ಒತ್ತಡಕ್ಕೆ ಕಾರಣವಾಗಿ, ನೇರವಾಗಿ ರಕ್ತದೊತ್ತಡದ ಮೇಲೆ ಪರಿಣಾಮ ಬೀರುತ್ತದೆ ಮಾತ್ರವಲ್ಲದೆ, ಡಯಾಬಿಟೀಸ್ ಹೆಚ್ಚಳಕ್ಕೂ ತನ್ನ ಕೊಡುಗೆ ನೀಡುತ್ತದೆ ಎನ್ನುತ್ತಾರೆ ತಜ್ಞರು.
ಜಂಕ್ ಫುಡ್ ಇಷ್ಟಾನೋ...
ನಗರೀಕರಣ ಹೆಚ್ಚಾದಂತೆ, ಯಾವುದೇ ಪೋಷಕಾಂಶಗಳಿಲ್ಲದ, ಜಂಕ್ ಆಹಾರಕ್ಕೆ ನಾವೆಲ್ಲಾ ಮೊರೆ ಹೋಗುತ್ತಿದ್ದೇವೆ. ನಾರಿನಂಶವಿರುವ ಗೋಧಿಯ ಬದಲು, ಅತ್ಯಲ್ಪ ಕಾರ್ಬೊಹೈಡ್ರೇಟ್ ಇರುವ ಮೈದಾ ಹಿಟ್ಟಿನ ಆಹಾರಕ್ಕೆ, ಪಾಸ್ತಾ, ಪಿಜ್ಜಾ, ನೂಡಲ್... ಏನೇನೋ ಕಂಡು ಕೇಳರಿಯದ ಪೋಷಕಾಂಶಗಳಿಲ್ಲದ ಆಹಾರಕ್ಕೆ ಬಲಿಯಾಗುತ್ತಿದ್ದೇವೆ. ನಾಲಿಗೆ ಚಪಲ ಬಿಡಬೇಕಲ್ಲ... ಅದೂ ಇರಲಿ, ನಮ್ಮ ಸಾಂಪ್ರದಾಯಿಕ ಆಹಾರಗಳೂ ಇರಲಿ. ಇಲ್ಲವಾದಲ್ಲಿ ಪರಿತಪಿಸಬೇಕಾಗಿರುವುದು ನಾವೇ ಅಲ್ಲವೇ?
ಒಂದು ವರದಿಯ ಪ್ರಕಾರ, ಪಾಶ್ಚಾತ್ಯರಿಗೆ ಹೋಲಿಸಿದರೆ ಮಧುಮೇಹಕ್ಕೆ ತುತ್ತಾಗುವ ಭಾರತೀಯರ ವಯಸ್ಸು ಅವರಿಗಿಂತ ಸುಮಾರು 10-20 ವರ್ಷ ಕಡಿಮೆ. ಅಂದರೆ ಯುವ ಪ್ರಾಯದಲ್ಲೇ ಇದು ಬಾಧಿಸುತ್ತದೆ. ಇದಕ್ಕೆ ಭಾರತೀಯ ಜೀವನ ಶೈಲಿ, ಆಹಾರ ಸೇವನಾ ಪದ್ಧತಿಯೂ ಪ್ರಮುಖ ಕಾರಣ.
ಹಾಗಿದ್ದರೆ ನಾವೇನು ಮಾಡಬಹುದು...
* ಮೊದಲು ರಕ್ತ ಪರೀಕ್ಷೆ ಮಾಡಿಸಿಕೊಂಡು, ಡಯಾಬಿಟಿಸ್ ಇದೆಯೇ ಎಂದು ತಿಳಿದುಕೊಳ್ಳಬೇಕು. ಡಯಾಬಿಟೀಸ್ ಆರಂಭವಾದಾಗಲೇ ಇದು ಪತ್ತೆಯಾದರೆ, (ಇದನ್ನು ಪ್ರಿ-ಡಯಾಬಿಟಿಸ್ ಅಂತ ಕರೀತಾರೆ) ಅದನ್ನು ಗುಣಪಡಿಸುವುದು ಸುಲಭ. ಆದರೆ ಅದು ಡಯಾಬಿಟಿಸ್ ಹಂತಕ್ಕೆ ತಲುಪಿದರೆ, ಅದನ್ನು ಸಂಪೂರ್ಣ ಕಿತ್ತು ಹಾಕುವ ಮದ್ದಿಲ್ಲ. ಹೀಗಾಗಿ ಬಾರದಂತೆ ತಡೆಯುವುದೇ ನಮ್ಮ ಉದ್ದೇಶವಾಗಿರಬೇಕು.
* ತೂಕದವರಾಗಿದ್ದರೆ, ಆದಷ್ಟು ಬೇಗ ತೂಕ ಇಳಿಸಿಕೊಳ್ಳಬೇಕು. ಬೊಜ್ಜು ಕಡಿಮೆಯಾದರೆ ಡಯಾಬಿಟೀಸ್‌ನ ರಿಸ್ಕ್ ಕೂಡ ಕಡಿಮೆಯಾಗುತ್ತದೆ ಎಂಬುದನ್ನು ಮರೆಯಬೇಡಿ. ಜೀವನಶೈಲಿ - ಆಹಾರ ಸೇವನೆಯಲ್ಲಿ ಬದಲಾವಣೆ ಮತ್ತು ನಿಯಮಿತ ವ್ಯಾಯಾಮ ಮಾಡಿದರೆ ಅತ್ಯುತ್ತಮ. ಸೊಪ್ಪು-ತರಕಾರಿ, ಪೂರಿ, ಮೈದಾದಿಂದ ಮಾಡಿದ ಬ್ರೆಡ್ ಐಟಂ ಮುಂತಾದವುಗಳ ಬದಲು ರೋಟಿ, ಕುಚ್ಚಲಕ್ಕಿಯಂತಹಾ ಪೂರ್ಣಧಾನ್ಯದ ಆಹಾರ ಧಾರಾಳ ಸೇವಿಸಬೇಕು.
* ಬಣ್ಣ ಬಣ್ಣದ ಪೊಟ್ಟಣಗಳಲ್ಲಿ ಬರುವ ಚಿಪ್ಸ್, ಕುಕೀಸ್, ಕೇಕುಗಳು, ಐಸ್ ಕ್ರೀಂಗಳು ಮುಂತಾದವುಗಳನ್ನು ಸಾಧ್ಯವಾದಷ್ಟು ದೂರ ಮಾಡಿ.
* ದಿನಕ್ಕೆ ಕನಿಷ್ಠ ಅರ್ಧಗಂಟೆಯಂತೆ ವಾರದ ಐದು ದಿನಗಳಾದರೂ ವ್ಯಾಯಾಮ ಮಾಡಬೇಕು.
* ಸಾಧ್ಯವಿರುವಾಗಲೆಲ್ಲಾ ನಡೆಯಿರಿ, ಮೆಟ್ಟಿಲು ಹತ್ತಿ ತಾರಸಿಗೆ ಹೋಗಿ.
* ಮಾನಸಿಕ ಒತ್ತಡ ನಿವಾರಣೆಗಾಗಿ ಯೋಗ ಅಥವಾ ಧ್ಯಾನಕ್ಕೆ ಮೊರೆ ಹೋಗಿ.
* ಧೂಮಪಾನ ತ್ಯಜಿಸಿ
* ಮದ್ಯಪಾನದಿಂದ ದೂರವಿರಿ.

ಚಳಿಗಾಲ: ಒಡೆಯುವ ಮುಖದ ಚರ್ಮಕ್ಕೆ ಇಲ್ಲಿದೆ ಪರಿಹಾರ
ಚಳಿಗಾಲದಲ್ಲಿ ಚರ್ಮದ ಆರೈಕೆ ಎಲ್ಲರಿಗೂ ಕಷ್ಟವೇ. ಕೈಕಾಲುಗಳೆಲ್ಲ ಬಿರುಕು ಬಿಟ್ಟು ನೋಡಲು ಅಸಹ್ಯವಾಗಿ ಕಂಡರೆ, ತುಟಿಯೂ ಒಣಗಿ ರಕ್ತ ಸೋರಿ, ಮುಖದ ಚರ್ಮವೂ ಒರಟಾಗಿ ಏನು ಮಾಡಲಿ ಎಂದು ಅರ್ಥವಾಗುವುದಿಲ್ಲ. ಇದು ಕೇವಲ ಹುಡುಗಿಯರ ಸಮಸ್ಯೆ ಮಾತ್ರವಲ್ಲ. ಹುಡುಗರದ್ದೂ ಕೂಡಾ. ಎಲ್ಲ ವಯಸ್ಸಿನವರಿಗೂ ಚಳಿಗಾಲದಲ್ಲಿ ಚರ್ಮದ ರಕ್ಷಣಯೇ ದೊಡ್ಡ ಸಮಸ್ಯೆ. ಹಾಗಾಗಿ ಚಳಿಗಾಲದಲ್ಲಿ ಚರ್ಮ ನುಣುಪಾಗಿರಲು ವಯಸ್ಸು ಹಾಗೂ ಲಿಂಗಬೇಧವಿಲ್ಲದೆ ಮನೆಯಲ್ಲೇ ಮಾಡಬಹುದಾದ ರಕ್ಷಣೆಯ ಕೆಲವು ವಿಧಾನಗಳು ಇಲ್ಲಿವೆ. ಪ್ರಯತ್ನಿಸಿ ನೋಡಿ.
ಬಾಳೆಹಣ್ಣಿನ ಮಾಸ್ಕ್- ನಿಮ್ಮ ಮುಖದ ಚರ್ಮ ಎಣ್ಣೆಯುಕ್ತ ಹಾಗೂ ಒಣ ತ್ವಚೆಯಾಗಿದ್ದರೆ, ಬಾಳೆಹಣ್ಣಿನ ಮಾಸ್ಕ್ ಪ್ರಯೋಗಿಸಬಹುದು. ಚೆನ್ನಾಗಿ ಹಿಸುಕಿದ ಬಾಳೆಹಣ್ಣನ್ನು ಸ್ವಲ್ಪ ಕೆನೆಯೊಂದಿಗೆ ಸೇರಿಸಿ ಮಿಕ್ಸ್ ಮಾಡಿ ಸ್ವಚ್ಛ ಮುಖಕ್ಕೆ ಹಚ್ಚಿ ಅರ್ಧ ಗಂಟೆ ಬಿಟ್ಟು ತೊಳೆಯಿರಿ. ಇದಜು ನಿಮ್ಮ ಮುಖವನ್ನು ತುಂಬ ನಯವಾಗಿಸುತ್ತದೆ. ಚಳಿಗಾಲಕ್ಕೆ ಇದು ಹೇಳಿ ಮಾಡಿಸಿದ ಮಾಸ್ಕ್ ಮೊಟ್ಟೆಯ ಬಿಳಿಲೋಳೆಯ ಮಾಸ್ಕ್- ಮೊಟ್ಟೆಯ ಬಿಳಿ ಲೋಳೆಯನ್ನು ಚೆನ್ನಾಗಿ ಬೀಟ್ ಮಾಡಿ, ಅದನ್ನು ಮುಖಕ್ಕೆ ಚೆನ್ನಾಗಿ ಹಚ್ಚಿ ಅರ್ಧ ಗಂಟೆ ಬಿಟ್ಟು ತೊಳೆಯಿರಿ. ಈ ಮಾಸ್ಕ್ ನಿಮ್ಮ ಮುಖವನ್ನು ರಿಫ್ರೆಶ್ ಮಾಡುವುದಲ್ಲದೆ, ನಿಮ್ಮ ಚರ್ಮರಂಧ್ರಗಳನ್ನು ಟೈಟ್ ಮಾಡಿಸುತ್ತದೆ. ಇದು ನಿಮ್ಮನ್ನು ಇನ್ನು ಆರೋಗ್ಯಯುತವಾಗಿ ಕಂಗೊಳಿಸುವಂತೆ ಮಾಡುತ್ತದೆ. ಚಳಿಗಾಲದಲ್ಲಂತೂ ಇದು ಕಟುವಾದ ಚಳಿಗಾಳಿಗಳಿಂದ ನಿಮ್ಮ ಚರ್ಮಕ್ಕೆ ಸುರಕ್ಷೆ ನೀಡುತ್ತದೆ.
ಹಾಲಿನ ಮಾಸ್ಕ್- ಚಳಿಗಾಲದಲ್ಲಿ ಕಚೇರಿಗೆ ಹೋಗುವ ಮಂದಿಯ ಕಷ್ಟವಂತೂ ಹೇಳತೀರದು. ಹೊರಗಿನ ವಾತಾವರಣದ ಚಳಿಗಾಳಿಗೆ ಮುಖದ ಚರ್ಮ ಬಹುಬೇಗನೆ ಬಿರುಸಾಗುತ್ತದೆ. ಅದಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಲು ಸರಿಯಾದ ಸಮಯದ ಕೊರತೆಯೂ ಕಾಡುತ್ತದೆ. ಆಧರೆ ಮನೆಯಲ್ಲೇ ಸುಲಭವಾಗಿ ಹೆಚ್ಚು ಸಮಯ ಅಗತ್ಯವಿಲ್ಲದ ಪ್ಯಾಕ್ ಮಾಡಿ ಮುಖಕ್ಕೆ ಹಚ್ಚಬಹುದು. ಹಾಲಿನ ಮಾಸ್ಕ್ ಕೂಡಾ ಅಂತಹ ಪ್ಯಾಕ್‌ಗಳಲ್ಲೊಂದು. ಹಾಲಿನ ಕೆನೆ, ಸ್ವಲ್ಪ ಮೊಸರು ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ. ಕಚೇರಿ ಕೆಲಸದಿಂದ ಸುಸ್ತಾಗಿರುವ ಮುಖದ ಚರ್ಮಕ್ಕಿದು ತಾಜಾತನದ ಅನುಭೂತಿ ನೀಡುವ ಜೊತೆಗೆ ಚಳಿಗಾಲದ ಚರ್ಮದ ತೊಂದರೆಗಳನ್ನು ತೊಡೆದು ಹಾಕಿ ನಯವಾದ ಮುಖದ ಚರ್ಮ ನೀಡುತ್ತದೆ. 10. 15 ನಿಮಿಷದ ನಂತರ ಹಚ್ಚಿದ ಪ್ಯಾಕ್ ತೊಳೆಯಬಹುದು.
ಬೆಣ್ಣೆಹಣ್ಣಿನ ಮಾಸ್ಕ್- ಚಳಿಗಾಲದಲ್ಲಿ ಹೆಚ್ಚು ಒಣಚರ್ಮವಾಗಿರುವ ಮಂದಿಗೆ ಸೂಕ್ತ ಮಾಸ್ಕ್ ಎಂದರೆ ಅದು ಬೆಣ್ಣೆಹಣ್ಣಿನ ಮಾಸ್ಕ್. ಬೆಣ್ಣೆಹಣ್ಣಿನ ಒಳಗಿನ ಭಾಗವನ್ನು ತೆಗೆದು ಅದನ್ನು ಪೇಸ್ಟ್ ಮಾಡಿ ಅದಕ್ಕೆ ಸ್ವಲ್ಪ ಆಲಿವ್ ಆಯಿಲ್ ಸೇರಿಸಿ ಮುಖಕ್ಕೆ ಹಚ್ಚಿ. ಅರ್ಧ ಗಂಟೆ ಬಿಟ್ಟು ತೊಳೆಯಿರಿ. ಚಳಿಗಾಲದ ಒಣಗುವಿಕೆಯ್ನನು ತಡೆಯಲು ಇದು ಚರ್ಮಕ್ಕೆ ಎಲ್ಲಾ ರೀತಿಯ ವಿಟಮಿನ್, ಪೋಷಣೆಯನ್ನು ನೀಡುವುದರಿಂದ ಇದು ಹೆಚ್ಚು ಒಣಗುವ ಒಡೆಯುವ ಚರ್ಮದವರಿಗೆ ಅತ್ಯುತ್ತಮ.
ಜೇನಿನ ಮಾಸ್ಕ್- ಜೇನು ಒಂದೆರಡು ಚಮಚ ತೆಗೆದುಕೊಂಡು ಅದಕ್ಕೆ ರೋಸ್ ವಾಟರ್ ಒಂದು ಚಮಚ ಸೇರಿಸಿ. (ರೋಸ್ ವಾಟರ್ ಸೇರಿಸದೆಯೂ ಹಾಗೆಯೇ ಜೇನನ್ನೂ ಮುಖಕ್ಕೆ ಹಚ್ಚಿಕೊಳ್ಳಬಹುದು) ಈ ಮಿಶ್ರಣವನ್ನು ಮುಖಕ್ಕೆ ಹಚ್ಚಿ 15 ನಿಮಿಷ ಬಿಟ್ಟು ತೊಳೆಯಿರಿ.
ಪಪ್ಪಾಯಿ ಫೇಸ್ ಪ್ಯಾಕ್- ಪಪ್ಪಾಯಿ ಹಣ್ಣನ್ನು ಹಿಸುಕಿ ಚೆನ್ನಾಗಿ ಪೇಸ್ಟ್ ಮಾಡಿ ಮುಖ, ಕುತ್ತಿಗೆಗೆ ಹಚ್ಚಿ. 15 ನಿಮಿಷ ಬಿಟ್ಟು ತೊಳೆಯಿರಿ. ಚರ್ಮ ನುಣುಪಾಗಿ ಹೊಳೆಯುತ್ತದೆ.
ದ್ರಾಕ್ಷಿ ಮಾಸ್ಕ್- ದ್ರಾಕ್ಷಿ ಹಣ್ಣಿನ ಬೀಜ ತೆಗೆದು ಚೆನ್ನಾಗಿ ಪೇಸ್ಟ್ ಮಾಡಿ. ಇದನ್ನು ಚೆನ್ನಾಗಿ ಮುಖಕ್ಕೆ ಹಚ್ಚಿ ತೊಳೆಯಿರಿ.
ಬಾದಾಮಿ ಎಣ್ಣೆ, ಹಾಲು ಫೇಸ್ ಪ್ಯಾಕ್- ಬಾದಾಮಿ ಎಣ್ಣೆ, ಸ್ವಲ್ಪ ಸಕ್ಕರೆ ಹಾಗೂ ಬಿಸಿ ಮಾಡದ ತಾಜಾ ಹಾಲನ್ನು ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ. ಮುಖ, ಕತ್ತಿಗೆ ಲೇಪಿಸಿ 15 ನಿಮಿಷ ಬಿಟ್ಟು ತೊಳೆಯಿರಿ.
ಕ್ಯಾರೆಟ್- ಜೇನಿನ ಮಾಸ್ಕ್- ಕ್ಯಾರೆಟನ್ನು ತುರಿದು ಪೇಸ್ಟ್ ಮಾಡಿ. ಅದಕ್ಕೆ ಜೇನು ಸೇರಿಸಿ. ಮುಖಕ್ಕೆ ಹಚ್ಚಿ 15 ನಿಮಿಷ ಬಿಟ್ಟು ತೊಳೆಯಿರಿ.
ತೆಂಗಿನ ಹಾಲಿನ ಮಾಸ್ಕ್- ತೆಂಗಿನಕಾಯಿ ತುರಿದು ಅದನ್ನು ರುಬ್ಬಿ ರಸ ತೆಗೆಯಿರಿ. ಹಾಗೇ ಆ ರಸವನ್ನು ಮುಖಕ್ಕೆ ಹಚ್ಚಿ ಸ್ವಲ್ಪ ಮಸಾಜ್ ಮಾಡಿ 15 ನಿಮಿಷ ಬಿಟ್ಟು ತೊಳೆಯಿರಿ.
ಟೊಮ್ಯಾಟೋ-ಮೊಸರಿನ ಪ್ಯಾಕ್- ಚೆನ್ನಾಗಿ ಪೇಸ್ಟ್ ಮಾಡಿದ ಟೊಮ್ಯಾಟೋಗೆ ಸ್ವಲ್ಪ ಮೊಸರು ಸೇರಿಸಿ. ಒಂದೆರಡು ಹನಿ ರೋಸ್ ವಾಟರ್ ಸೇರಿಸಿ ಮುಖಕ್ಕೆ ಈ ಮಿಶ್ರಣ ಹಚ್ಚಿ. 15 ನಿಮಿಷ ಬಿಟ್ಟು ತೊಳೆಯಿರಿ.

Subscribe to:
Posts (Atom)